Ad imageAd image

ನ.10 ರಂದು ಸಾವಿರ ಮೀಟರ್ ಕರ್ನಾಟಕ ಬಾವುಟ ಯಾತ್ರೆ !

Kannada Bimba Team
2 Min Read
ಹಣ್ಮು ಪಾಜಿ

ಕನ್ನಡ ಬಿಂಬ, ಬೀದರ್

ಶ್ರೀ ಕೇತಕಿ ಶೈಕ್ಷಣಿಕ, ಸಾಮಾಜಿಕ ಮತ್ತು ಸಾಂಸ್ಕøತಿಕ ಸಂಸ್ಥೆ ಹಾಗೂ ಹಣ್ಮುಪಾಜಿ ಗೆಳೆಯರ ಬಳಗದ ವತಿಯಿಂದ ಕರ್ನಾಟಕ ರಾಜ್ಯೋತ್ಸವ ನಿಮಿತ್ತ ಬೀದರ್ ನಗರದಲ್ಲಿ ನ. 10 ರಂದು ಸಾವಿರ ಮೀಟರ್ ಉದ್ದದ ಕರ್ನಾಟಕ ಬಾವುಟ ಯಾತ್ರೆ, ತಾಯಿ ಭುವನೇಶ್ವರಿ, ಜ್ಞಾನಪೀಠ ಪ್ರಶಸ್ತಿ ಪುರಸ್ಕøತ ಭಾವಚಿತ್ರದ ಮೆರವಣಿಗೆ ಹಾಗೂ ಸಾಂಸ್ಕøತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಬೆಳಿಗ್ಗೆ 8.30ಕ್ಕೆ ಕಿತ್ತೂರು ರಾಣಿ ಚನ್ನಮ್ಮ ವೃತ್ತದಿಂದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದ ವರೆಗೆ ಬಾವುಟ ಯಾತ್ರೆ ಹಾಗೂ ಮೆರವಣಿಗೆ ಜರುಗಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಹಣ್ಮುಪಾಜಿ ತಿಳಿಸಿದ್ದಾರೆ.

ಬೆಂಗಳೂರಿನ ಇನ್‍ಸೈಟ್ಸ್ ಐಎಎಸ್ ತರಬೇತಿ ಕೇಂದ್ರದ ಸಂಸ್ಥಾಪಕ ನಿರ್ದೇಶಕ ಜಿ.ಬಿ. ವಿನಯಕುಮಾರ ಯಾತ್ರೆ ಹಾಗೂ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ.  ಬೆಳಿಗ್ಗೆ 11.30ಕ್ಕೆ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ನಡೆಯಲಿರುವ ಸಾಂಸ್ಕøತಿಕ ಕಾರ್ಯಕ್ರಮವನ್ನು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಉದ್ಘಾಟಿಸುವರು.  ಜೈ ಭಾರತ ಮಾತಾ ಸೇವಾ ಸಮಿತಿಯ ರಾಷ್ಟ್ರೀಯ ಸಂಸ್ಥಾಪಕ ಅಧ್ಯಕ್ಷ ಹವಾ ಮಲ್ಲಿನಾಥ ಮಹಾರಾಜ, ಲಿಂಗಾಯತ ಮಹಾಮಠದ ಪ್ರಭುದೇವ ಸ್ವಾಮೀಜಿ ಸಾನಿಧ್ಯ, ಸಂಸ್ಥೆಯ ಅಧ್ಯಕ್ಷ ಹಣ್ಮು ಪಾಜಿ ಅಧ್ಯಕ್ಷತೆ, ಪೌರಾಡಳಿತ ಸಚಿವ ರಹೀಂಖಾನ್, ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಘನ ಉಪಸ್ಥಿತಿ ವಹಿಸುವರು. ಜಿ.ಬಿ. ವಿನಯಕುಮಾರ ವಿಶೇಷ ಆಹ್ವಾನಿತರಾಗಿರುವರು ಎಂದು ಹಣ್ಮು ಪಾಜಿ ಮಾಹಿತಿ ನೀಡಿದ್ದಾರೆ.

ಮಾಜಿ ಸಚಿವ ಬಂಡೆಪ್ಪ ಕಾಶೆಂಪುರ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಮೃತರಾವ್ ಚಿಮಕೋಡೆ, ಮುಖಂಡರಾದ ಬಾಬುವಾಲಿ, ಸೂರ್ಯಕಾಂತ ನಾಗಮಾರಪಳ್ಳಿ, ಸಿದ್ರಾಮ ಸಿಂಧೆ, ಚಂದ್ರಕಾಂತ ಪೂಜಾರಿ, ಅಬ್ದುಲ್ ಖದೀರ್, ಸೋಮಶೇಖರ ಬಿರಾದಾರ ಚಿದ್ರಿ, ರವೀಂದ್ರ ಸ್ವಾಮಿ, ಸಂಜುಕುಮಾರ ಅತಿವಾಳೆ, ಸುರೇಶ ಚನಶೆಟ್ಟಿ, ಶಶಿ ಪಾಟೀಲ ಚೌಳಿ, ಬಾಬುರಾವ್ ಮಲ್ಕಾಪುರೆ, ಪೀರಪ್ಪ ಯರನಳ್ಳಿ, ಮಲ್ಲಿಕನಾಥ ಮಡಿಗೆ, ಮಹೇಶ್ ಮೈಲಾರೆ, ಲಕ್ಷ್ಮಿ ಬಾವಗೆ, ವೀರಶೆಟ್ಟಿ ಖ್ಯಾಮಾ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

ಅನುಭವ ಎಜುಕೇಷನ್ ಟ್ರಸ್ಟ್ ಅಧ್ಯಕ್ಷೆ ಲಿಂಗಾರತಿ ಅಲ್ಲಮಪ್ರಭು ವಿಶೇಷ ಉಪನ್ಯಾಸ ನೀಡುವರು. ಇದೇ ವೇಳೆ ಡಾ. ನಾಗಲಕ್ಷ್ಮಿ ಚೌಧರಿ ಅವರಿಗೆ ಕನ್ನಡ ಸಾರಥಿ ಪ್ರಶಸ್ತಿ ಹಾಗೂ ವಿವಿಧ ಕ್ಷೇತ್ರಗಳ 70 ಸಾಧಕರಿಗೆ ರಾಜ್ಯಮಟ್ಟದ ಕನ್ನಡ ಸೇವಾ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುವುದು. ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ ಕೋಸಂಬೆ, ರಾಜ್ಯ ಅಲ್ಪಸಂಖ್ಯಾತರ ಆಯೋಗದ ಸದಸ್ಯೆ ಮನ್‍ದೀಪ್ ಕೌರ್ ಹಾಗೂ ಮುಖಂಡ ಆನಂದ ದೇವಪ್ಪ ಅವರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದ್ದಾರೆ.

ನೃತ್ಯಾಂಗನ ತಂಡದವರು ಸಾಂಸ್ಕøತಿಕ ನೃತ್ಯ ಹಾಗೂ ಸಂಗೀತ ನಿರ್ದೇಶಕ ಗಣೇಶ ಸಿ.ಎ. ರಸಮಂಜರಿ ನಡೆಸಿಕೊಡಲಿದ್ದಾರೆ. ಕನ್ನಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

Share This Article

You cannot copy content of this page