Ad imageAd image

ಒಂದೂ ಕೈಗಾರಿಕೆ ರಾಜ್ಯದಿಂದ ಹೊರ ಹೋಗಿಲ್ಲ : ಎಂ.ಬಿ.ಪಾಟೀಲ

Kannada Bimba Team
2 Min Read
ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ

ಕನ್ನಡ ಬಿಂಬ, ಮೈಸೂರು

ರಾಜ್ಯದಿಂದ ಒಂದೇ ಒಂದು ಕೈಗಾರಿಕೆಯೂ ಹೊರಹೋಗಿಲ್ಲ. ಈ ವಿಚಾರವಾಗಿ ಹಬ್ಬಿಸುತ್ತಿರುವ ತಪ್ಪು ಕಲ್ಪನೆಯಿಂದ ಎಲ್ಲರೂ ಹೊರಬರಬೇಕಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹೇಳಿದರು. ರಾಜ್ಯದಲ್ಲಿ ಕೈಗಾರಿಕೆಗಳ ಬೆಳವಣಿಗೆಗೆ ಅತ್ಯಗತ್ಯವಾದ ಕಾರ್ಯಪರಿಸರ ಅತ್ಯುತ್ತಮವಾಗಿದ್ದು, ಇಲ್ಲಿ ಅತ್ಯುತ್ತಮ ಪ್ರತಿಭಾ ಸಂಪನೂಲವಿದೆ. ಜೊತೆಗೆ ಸರ್ಕಾರದ ಕೈಗಾರಿಕಾ ನೀತಿಗಳು ಚೆನ್ನಾಗಿವೆ ಎಂದು ಅವರು ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಕಳೆದ ಫೆಬ್ರವರಿಯಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಸಲಾಯಿತು. ಇದರ ಮೂಲಕ 10.27 ಲಕ್ಷ ಕೋಟಿ ರೂ. ಬಂಡವಾಳ ಹರಿದು ಬರುವ ಖಾತ್ರಿ ಸಿಕ್ಕಿತು. ಈ ಪೈಕಿ ಶೇ.60ಕ್ಕಿಂತ ಹೆಚ್ಚು ಬಂಡವಾಳ ಈಗಾಗಲೇ ನಮಲ್ಲಿ ಹೂಡಿಕೆ ಮಾಡಲ್ಪಟ್ಟಿದೆ. ನಾವು ಬರೀ ಮಾತನಾಡುವುದಿಲ್ಲ. ನುಡಿದಂತೆ ನಡೆಯುತ್ತಿದ್ದೇವೆ. ಈ ಹೂಡಿಕೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಉದ್ಯೋಗಗಳೂ ಸೃಷ್ಟಿಯಾಗುತ್ತಿವೆ ಎಂದು ಅವರು ವಿವರಿಸಿದರು.

ನಾನು ಕೈಗಾರಿಕಾ ಸಚಿವನಾದ ಮೇಲೆ ಹಲವು ದೇಶಗಳಿಗೆ ಭೇಟಿ ಕೊಟ್ಟು, ಹೂಡಿಕೆದಾರರನ್ನು ರಾಜ್ಯಕ್ಕೆ ಕರೆತರುತ್ತಿದ್ದೇನೆ. ಫಾರ್ಕಕಾನ್ ತರಹದ ದೈತ್ಯ ಕಂಪನಿಯು ತೈವಾನ್ ನಂತರದ ತನ್ನ ಬೃಹತ್ ಘಟಕವನ್ನು ನಮಲ್ಲಿ ಆರಂಭಿಸಿದೆ. ಇಲ್ಲಿಂದ ದುಬಾರಿ ಮೊಬೈಲ್ ಫೆÇೀನುಗಳು ರಫ್ತಾಗಿ ಹೋಗುತ್ತವೆ. ಜಪಾನ್ ತರಹದ ಸಂಪ್ರದಾಯವಾದಿ ದೇಶದಿಂದ ಕಳೆದ ಎರಡು ವರ್ಷಗಳಲ್ಲಿ ರಾಜ್ಯಕ್ಕೆ 10,500 ಕೋಟಿ ರೂ. ಬಂಡವಾಳ ಹೂಡಿಕೆಯ ಖಾತ್ರಿ ಸಿಕ್ಕಿದೆ.

ಸಾಮಾನ್ಯವಾಗಿ ಅಲ್ಲಿ ಕುಟುಂಬ ಪರಿವಾರಗಳೇ ಕೈಗಾರಿಕೆ ನಡೆಸುವುದರಿಂದ, ನಿರ್ಧಾರ ತೆಗೆದುಕೊಳ್ಳುವುದು ನಿಧಾನವಾಗುತ್ತದೆ. ಆದರೂ ನಮ ವಿಚಾರದಲ್ಲಿ ಎಲ್ಲವೂ ತ್ವರಿತ ಗತಿಯಲ್ಲಿ ಸಂಭವಿಸಿದೆ. ಒಸಾಕಾವಾ ಕಂಪನಿ ಕೂಡ ಹೂಡಿಕೆ ಮಾಡಲು ಬಂದಿದೆ ಎಂದು ಅವರು ಹೇಳಿದರು.

ನಮಲ್ಲಿ ಸೆಮಿಕಂಡಕ್ಟರ್ ಸೇರಿದಂತೆ ಹಲವು ಕ್ಷೇತ್ರಗಳಿಗೆ ಪ್ರೋತ್ಸಾಹವಿದೆ. ನಮ ಕೈಗಾರಿಕಾ ನೀತಿ ಉದ್ಯಮ ಸ್ನೇಹಿಯಾಗಿದೆ. ಆದರೆ, ಕೇಂದ್ರ ಸರ್ಕಾರವು ಸೆಮಿಕಂಡಕ್ಟರ್ ಮಿಷನ್ ಅಡಿಯಲ್ಲಿ ವಿಶೇಷ ಪ್ರೋತ್ಸಾಹನಾ ಕ್ರಮಗಳನ್ನು ಹೊಂದಿದ್ದು, ಇಂತಹ ಕಂಪನಿಗಳನ್ನು ಬಿಜೆಪಿ ಆಡಳಿತವಿರುವ ಗುಜರಾತ್, ಮಹಾರಾಷ್ಟ್ರ ಮುಂತಾದ ರಾಜ್ಯಗಳಿಗೆ ಕಳಿಸಿ ಕೊಡುತ್ತಿದೆ ಎಂದು ಕೈಗಾರಿಕಾ ಸಚಿವರು ಬೇಸರ  ವ್ಯಕ್ತಪಡಿಸಿದರು.

`ಇದರಲ್ಲಿ ನಮ ತಪ್ಪೇನೂ ಇಲ್ಲ. ಹಿಂದೆ ಒಂದು ಕಂಪನಿ ಸೆಮಿಕಂಡಕ್ಟರ್ ಕ್ಷೇತ್ರದಲ್ಲಿ ರಾಜ್ಯದಲ್ಲೇ ಹೂಡಿಕೆ ಮಾಡಲು ತೀರ್ಮಾನಿಸಿತ್ತು. ಆದರೆ, ದೆಹಲಿಗೆ ಹೋದಮೇಲೆ ಅವರು ಮನಸ್ಸುಬದಲಿಸಿದರು. ಕೇಂದ್ರ ಸರ್ಕಾರವು ಇಂತಹ ತಾರತಮ್ಯವನ್ನು ಬಿಡಬೇಕು’ ಎಂದು ಅವರು ಅಭಿಪ್ರಾಯಪಟ್ಟರು.

 

Share This Article

You cannot copy content of this page