Ad imageAd image

ಬೆಳೆ ವಿಮೆ ಬಿಜೆಪಿ ಪ್ರಾಯೋಜಿತ ಗೋಲ್ಮಾಲ್ ಯೋಜನೆ : ಖಂಡ್ರೆ

Kannada Bimba Team
1 Min Read
ಈಶ್ವರ ಖಂಡ್ರೆ, ಅರಣ್ಯ ಸಚಿವರು
ಈಶ್ವರ ಖಂಡ್ರೆ, ಅರಣ್ಯ ಸಚಿವರು

 

ಕನ್ನಡ ಬಿಂಬ, ಬೀದರ್

ಪ್ರಧಾನ ಮಂತ್ರಿ ಬೆಳೆ ವಿಮೆ ಯೋಜನೆಯಡಿ ರೈತರು, ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರÀ ಪಾವತಿಸಿರುವ ಕಂತಿನ ಹಣ ಎಷ್ಟು ? ಈವರೆಗೆ ರೈತರಿಗೆ ನೀಡಿರುವ ಪರಿಹಾರ ಎಷ್ಟು ಎಂಬ ಬಗ್ಗೆ ಕೇಂದ್ರ ಸರಕಾರ ಶ್ವೇತಪತ್ರ ಹೊರಡಿಸಲಿ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸವಾಲು ಹಾಕಿದ್ದಾರೆ.

ಸದನದಲ್ಲಿ ತಾವು ಫಸಲು ಬಿಮಾ ಯೋಜನೆ ಬಗ್ಗೆ  ಸುಳ್ಳು ಮಾಹಿತಿ ನೀಡಿದ್ದಾಗಿ ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ ಮಾಡಿರುವ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, ವಿಮೆ ಯೋಜನೆ ಬಗ್ಗೆ ಶ್ವೇತಪತ್ರ ಹೊರಡಿಸಿದರೆ ಖಾಸಗಿ ವಿಮಾ ಕಂಪನಿಗಳಿಗೆ ಕೇಂದ್ರ ಸರ್ಕಾರ ಹೇಗೆ ಲಾಭ ಮಾಡಿಕೊಡುತ್ತಿದೆ ಎಂಬುದು ಬಯಲಾಗಲಿದೆ ಎಂದಿದ್ದಾರೆ.

ದೇಶಾದ್ಯಂತ ಬೆಳೆ ವಿಮೆ ಯೋಜನೆ ಜಾರಿಯಾದ ದಿನದಿಂದ ಈವರೆಗೆ ವಿಮಾ ಕಂಪನಿಗಳು ಉದ್ದಾರ ಆಗಿವೆಯೇ ಹೊರತು ರೈತರಲ್ಲ. ಇದೊಂದು ಬಿಜೆಪಿ ಪ್ರಾಯೋಜಿತ ಪಕ್ಕಾ ಗೋಲ್ಮಾಲ್ ಯೋಜನೆ ಎಂದು ಈಶ್ವರ ಖಂಡ್ರೆ ಆರೋಪಿಸಿದ್ದಾರೆ.

ಕೋವಿಡ್ ಸಮಯದಲ್ಲಿ ಜನರು ಆಕ್ಸಿಜನ್ ಸಿಗದೇ ರೆಮಿಡಿಸಿವೀರ್ ಚುಚ್ಚುಮದ್ದು ಸಿಗದೇ, ಉದ್ಯೋಗವೂ ಇಲ್ಲದೆ ಹಸಿವಿನಿಂದ ಬಳಲುತ್ತಿದ್ದಾಗ ಮನೆಯಲ್ಲಿ ಬಾಗಿಲು ಮುಚ್ಚಿ ಕುಳಿತಿದ್ದ ಖೂಬಾ ಈಗ ಬೀದಿಯಲ್ಲಿ ನಿಂತು ವೀರಾವೇಷದಿಂದ ಮಾತನಾಡಿದರೆ ಜನ ನಂಬುವುದಿಲ್ಲ ಅವರಿಗೆ ಸತ್ಯದ ಅರಿವಿದೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ. ಖೂಬಾಗೆ ಮಾಡಲು ಕೆಲಸವಿಲ್ಲ; ಈಗ ನಿರುದ್ಯೋಗಿಯಾಗಿದ್ದಾರೆ ಹೀಗಾಗಿ ಪತ್ರಿಕಾ ಹೇಳಿಕೆ ನೀಡುತ್ತಾ, ಕಾಲ ಕಳೆಯುತ್ತಿದ್ದಾರೆ ಎಂದು ಖಂಡ್ರೆ ತಿರುಗೇಟು ನೀಡಿದ್ದಾರೆ.

Share This Article

You cannot copy content of this page