Ad imageAd image

ಪಿ.ಸಾಯಿನಾಥರ ಕೃತಿ ಗ್ರಾಮೀಣ ಪತ್ರಿಕೋದ್ಯಮದ ಬೈಬಲ್ : ಕೆವಿಪಿ

Kannada Bimba Team
3 Min Read

 

ಕನ್ನಡ ಬಿಂಬ, ಗದಗ

ಸಭಾಪತಿ ಬಸವರಾಜ ಹೊರಟ್ಟಿ ಅವರು ತಾಯಿ ಹೆಸರಲ್ಲಿ ಮಾಡುತ್ತಿರುವ ಕಾರ್ಯ ಮಾದರಿಯಾಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಶ್ಲಾಘಿಸಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಮಹಾತ್ಮಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಸಹಯೋಗದಲ್ಲಿ ಆಯೋಜಿಸಿದ್ದ ಅವ್ವ ಸೇವಾ ಟ್ರಸ್ಟ್ ಮಾತೋಶ್ರೀ ಗುರವ್ವ ಶಿವಲಿಂಗಪ್ಪ  ಹೊರಟ್ಟಿ ಸ್ಮರಣಾರ್ಥ ದತ್ತಿ ನಿಧಿ ಕಾರ್ಯಕ್ರಮದಲ್ಲಿ  ತನುಜಾ ನಾಯಕ ಅವರಿಗೆ ದತ್ತಿ ಪ್ರಶಸ್ತಿ  ಪ್ರದಾನ ಮಾಡಿ ಅವರು ಮಾತನಾಡಿದರು.

ಮಾತೋಶ್ರೀ ಗುರುವ್ವ ಶಿವಲಿಂಗಪ್ಪ ಅವ್ವ ಹೊರಟ್ಟಿ ಈ ಕಾರ್ಯಕ್ರಮದ ನೈತಿಕ ಶಕ್ತಿ ಆಗಿದ್ದಾರೆ. ಈ ತಾಯಿಯ ಕಾಳಜಿ, ಸಂಸ್ಕಾರ ಮತ್ತು ಕನವರಿಕೆಗಳನ್ನು ಅಕ್ಷರಕ್ಕೆ ಇಳಿಸುತ್ತಾ ಅವರ ಹೆಸರಿನ ಪ್ರಶಸ್ತಿ ಸ್ವೀಕರಿಸುತ್ತಿರುವ ಸುನಂದಾ ನಾಯಕ ಅವರ ಆಯ್ಕೆ ಅತ್ಯಂತ ಸೂಕ್ತವಾಗಿದೆ ಎಂದು ಪ್ರಭಾಕರ ಮೆಚ್ಚುಗೆ ವ್ಯಕ್ತಪಡಿಸಿದರು.

ಶರಣರ ಬಾಳನ್ನು ಮರಣದಲ್ಲಿ ಕಾಣು ಎನ್ನುವ ಮಾತೊಂದಿದೆ. ಶರಣರು ಮರಣ ನಂತರವೂ ಜನ ಮಾನಸದಲ್ಲಿ ಬದುಕುತ್ತಾರೆ.  ಇವತ್ತಿನ ಈ ಕಾರ್ಯಕ್ರಮವೇ ಅವ್ವ ಗುರವ್ವ ಅವರ ಸಂಸ್ಕಾರ ಮತ್ತು ಚೈತನ್ಯ ಜೀವಂತಿಕೆಗೆ ಸಾಕ್ಷಿಯಾಗಿದೆ. ಇಂತಹ ಆದರ್ಶಪ್ರಾಯ ಅವ್ವನವರ ಹೆಸರಿನ ಪ್ರಶಸ್ತಿಗೆ ತನುಜಾ ನಾಯಕ ಅವರನ್ನು ಆಯ್ಕೆ ಮಾಡಿರುವುದು ಸೂಕ್ತವಾಗಿದೆ.  ಮಹಿಳಾ ಸಂವೇದನೆ, ಕೌಟುಂಬಿಕ ಮೌಲ್ಯಗಳು, ಸಾಮಾಜಿಕ ಜಾಗೃತಿ ಮತ್ತು ಜೀವನ ಪ್ರೀತಿಯನ್ನು ಸಾರುವಂತಹ ಲೇಖನಗಳನ್ನು ನಿರಂತರವಾಗಿ ಬರೆಯುತ್ತಿರುವ ತನುಜಾ ನಾಯಕ ಅವರ ಸಾಮಾಜಿಕ ನೋಟ ಇವತ್ತಿನ ಕಿರಿಯ ವೃತ್ತಿಬಾಂದವರಿಗೆ ಮಾದರಿಯಾಗಿದೆ ಎಂದರು.

ಗ್ರಾಮೀಣ ಪತ್ರಿಕೋದ್ಯಮ ಎನ್ನುತ್ತಲೇ ಪಿ.ಸಾಯಿನಾಥ್ ನೆನಪಾಗುತ್ತಾರೆ. ಅವರು ಬರೆದಿರುವ ಬರ ಎಂದರೆ ಎಲ್ಲರಿಗೂ ಇಷ್ಟ ಕೃತಿಯನ್ನು ಗ್ರಾಮೀಣ ಪತ್ರಿಕೋದ್ಯದ ಬೈಬಲ್ ಎಂದು ಕರೆಯಬಹುದು. ನಗರ ಕೇಂದ್ರಿತ ಪತ್ರಿಕೋದ್ಯಮವು ಜಿಡಿಪಿ ಬೆಳವಣಿಗೆ  ಅಥವಾ μÉೀರು ಮಾರುಕಟ್ಟೆಯ ಏರಿಳಿತವನ್ನು ಮಾತ್ರ ಅಭಿವೃದ್ಧಿ ಎಂದು ಬಿಂಬಿಸುತ್ತದೆ. ಆದರೆ ನಿಜವಾದ ಅಭಿವೃದ್ಧಿ ಎಂದರೆ ಗ್ರಾಮೀಣ ಭಾಗದ ಜನರ ಜೀವನಮಟ್ಟ ಸುಧಾರಿಸುವುದು ಮತ್ತು ಗ್ರಾಮೀಣ ಆರ್ಥಿಕತೆ ಬೆಳವಣಿಗೆ ಎನ್ನುವುದನ್ನು ಮರೆಯಬಾರದು ಎಂದರು.

ಕೇಂದ್ರ ಸರ್ಕಾರ ನೋಟು ನಿμÉೀಧ ಜಾರಿಗೆ ತಂದಾಗ ನಗರ ಕೇಂದ್ರಿತ ಆರ್ಥಿಕತೆ, ದುಡಿಮೆ ನೆಲಕಚ್ಚಿತು. ಆದರೆ, ಇಡೀ ದೇಶದ ಆರ್ಥಿಕತೆ ಪೂರ್ತಿ ನೆಲ ಕಚ್ಚದಂತೆ ಕಾಪಾಡಿದ್ದು ಗ್ರಾಮೀಣ ಆರ್ಥಿಕತೆ. ಸಾಸಿವೆ ಡಬ್ಬಿ, ಎಲೆ ಅಡಿಕೆ ಚೀಲದಲ್ಲಿ ಗ್ರಾಮೀಣ ಮಹಿಳೆಯರು ಕಾಪಿಡುವ, ಉಳಿತಾಯ ಮಾಡುವ ಹಣ ಕೋವಿಡ್ ಸಂದರ್ಭದಲ್ಲಿ ಸಾವಿರಾರು ಕುಟುಂಬಗಳ ಬದುಕಿಗೆ ಆಸರೆ ಆಗಿದ್ದನ್ನು ನೆನಪಿಸಿಕೊಳ್ಳಬೇಕು ಎಂದರು.

ಪತ್ರಿಕೋದ್ಯಮವು ಮೇಲ್ಮಟ್ಟದ ಆರ್ಥಿಕ ಪ್ರಗತಿಗಿಂತ ಹೆಚ್ಚಾಗಿ, ಹಳ್ಳಿಗಳ ಜನರ ಆರೋಗ್ಯ, ಶಿಕ್ಷಣ ಮತ್ತು ಕುಡಿಯುವ ನೀರಿನ ಲಭ್ಯತೆಯ ಬಗ್ಗೆ ಗಮನ ಹರಿಸಬೇಕಿದೆ ಎಂದರು.

ಮುಖ್ಯಮಂತ್ರಿಗಳು  ಯಾವುದೇ ಜಿಲ್ಲೆಯ ಕೆಡಿಪಿ ಸಭೆಗಳನ್ನು ನಡೆಸುವಾಗ  ಆಯಾ ಜಿಲ್ಲೆಗಳ ಗ್ರಾಮೀಣ ಬದುಕಿನ ಬಗ್ಗೆ ಪತ್ರಿಕೆಗಳಲ್ಲಿ ಬಂದಿರುವ ವರದಿಗಳನ್ನು ಮೊದಲು ಗಮನಿಸುತ್ತಾರೆ. ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳನ್ನು ಆ ಕುರಿತು ವಿಚಾರಿಸುತ್ತಾರೆ. ಕಲುಷಿತ ನೀರು ಕುಡಿದು ಸಾವನ್ನಪ್ಪಿದ ವರದಿಗಳು ಸರ್ಕಾರವನ್ನು ಎಚ್ಚರಿಸಿವೆ. ಬೆಳೆರೋಗದ ಬಗ್ಗೆ ಬಂದ ವರದಿಗಳು ಸಾವಿರಾರು ರೈತ ಕುಟುಂಬಗಳಿಗೆ ಪರಿಹಾರ ಒದಗಿಸಲು ನೆರವಾಗಿವೆ ಎಂದು ಪ್ರಭಾಕರ ಅವರು ಕೊಂಡಾಡಿದರು.

ಪತ್ರಕರ್ತರು, ಪತ್ರಿಕೋದ್ಯಮದ ವಿದ್ಯಾರ್ಥಿಗಳು ಹಳ್ಳಿಗಳಿಗೆ ಹೋಗಿ ಜನರ ಸಂಕಷ್ಟಗಳನ್ನು ಆಲಿಸುವುದು, ಸ್ಟುಡಿಯೋಗಳಲ್ಲಿ ಕುಳಿತು ಚರ್ಚೆ ಮಾಡುವುದಕ್ಕಿಂತ ಹೆಚ್ಚು ಉಪಯುಕ್ತವಾದುದು ಎಂದು ಪ್ರತಿಪಾದಿಸಿದರು. ಬರಗಾಲ ಮತ್ತು ಅತಿವೃಷ್ಟಿ ಹೆಸರಿನಲ್ಲಿ ಬರುವ ಅನುದಾನ ಹೇಗೆ ದುರುಪಯೋಗವಾಗುತ್ತದೆ ಎನ್ನುವುದನ್ನು ಗ್ರಾಮೀಣ ಪತ್ರಕರ್ತರು ಗಮನಿಸಿ ವರದಿ ಮಾಡಬೇಕು ಎಂದು ಕಿವಿಮಾತು ಹೇಳಿದರು.

ಗ್ರಾಮೀಣಾಭಿವೃದ್ಧಿಯಲ್ಲಿ ಪತ್ರಿಕೋದ್ಯಮದ ಪಾತ್ರವೆಂದರೆ ರೈತರ ಆತ್ಮಹತ್ಯೆಯ ಹಿಂದಿನ ನೈಜ ಸಾಲದ ಬಾಧೆಯನ್ನು ಹೊರಹಾಕುವುದು,  ಸರ್ಕಾರದ ನೀತಿಗಳು ಕೃಷಿಯ ಮೇಲೆ ಬೀರುತ್ತಿರುವ ದುಷ್ಪರಿಣಾಮಗಳನ್ನು ವಿಶ್ಲೇಷಿಸುವುದಾಗಿದೆ ಎಂದು ಅಭಿಪ್ರಾಯಪಟ್ಟರು.

ಪತ್ರಿಕೋದ್ಯಮವು ಸಮಾಜದ ಕನ್ನಡಿಯಾಗಿದ್ದರೆ, ಆ ಕನ್ನಡಿಯಲ್ಲಿ ಭಾರತದ ಶೇ. 70 ರಷ್ಟು  ಜನಸಂಖ್ಯೆ ಇರುವ ಹಳ್ಳಿಗಳು ಕಾಣಿಸಬೇಕು.  ಇಂಥಾ ವಿಶ್ಲೇಷಣೆಗಳು ಜನರ ಧ್ವನಿಯಾಗಿ ಗ್ರಾಮೀಣ ಭಾರತವನ್ನು ಬೆಳೆಸಬೇಕು. ಜೊತೆಗೆ ಹಳ್ಳಿಗಳ ಕಲೆ, ಸಂಸ್ಕøತಿ, ಭಾμÉ ಮತ್ತು ಅಲ್ಲಿನ ಜನರ ದೈನಂದಿನ ಹೋರಾಟಗಳಿಗೂ ಕನ್ನಡಿ ಹಿಡಿಯಬೇಕು. ಈ ಕನ್ನಡಿಯಲ್ಲಿ ವಿಧಾನಸೌಧದಲ್ಲಿ ಕುಳಿತಿರುವ ಅಧಿಕಾರಿಗಳು ಮುಖ ನೋಡಿಕೊಳ್ಳಬೇಕು ಎಂದರು.

ಸಭಾಪತಿ ಬಸವರಾಜ ಹೊರಟ್ಟಿ, ದತ್ತಿ ನಿಧಿ ಪ್ರಶಸ್ತಿ ಪುರಸ್ಕೃತ ತನುಜಾ ನಾಯಕ ಸೇರಿ ಜಿಲ್ಲಾ ಪತ್ರಕರ್ತರ ಸಂಘದ ಪದಾಧಿಕಾರಿಗಳು ಮತ್ತು ವಿವಿಯ ಕುಲಸಚಿವರಾದ ಸುರೇಶ್ ನಾಡಗೌಡ  ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

TAGGED:
Share This Article

You cannot copy content of this page